ಕಲಬುರಗಿ : ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮೆಹಬೂಬ್ ಪಾಷಾ ಎಂದು ಗುರುತಿಸಲಾಗಿದೆ. ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಹಿಳೆ ಕಳೆದ ಏಳು ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಪಿ ರಾತ್ರಿ ವಾರ್ಡ್ ಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನು ಕಂಡ ಮತ್ತೋರ್ವ ವ್ಯಕ್ತಿ ಆರೋಪಿಯನ್ನು ಹಿಡಿದು ಆಸ್ಪತ್ರೆ ಸಿಬ್ಬಂದಿಗೆ ಒಪ್ಪಿಸಿದ್ದಾನೆ. ಬ್ರಹ್ಮಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.