ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ…

53
firstsuddi

ಹುಬ್ಬಳ್ಳಿ: ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.

ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಪ್ರಹ್ಲಾದ್ ಜೋಶಿ, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಅನಂತ ಧನ್ಯವಾದಗಳು.

ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಬೊಮ್ಮಾಯಿ ಸರ್ಕಾರವೂ ಅತ್ಯಂತ ಪರಿಶ್ರಮ ವಹಿಸಿದೆ, ನಾನು ಬೊಮ್ಮಾಯಿ ಹಾಗೂ ಗೋವಿಂದ್ ಕಾರಜೋಳ ಅವರಿಗೆ ಕೂಡ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕ ಕಾಂಗ್ರೆಸ್ ಜನವರಿ 2 ರಂದು ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ಮಾಡಲು ಸಿದ್ಧತೆ ನಡೆಸಿತ್ತು. ಇದೀಗ, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ದೊರೆತಂತಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಟಾಂಗ್ ನೀಡಿದೆ.