ಕಸ ಎಸೆಯಲು ಹೋದ ಯುವತಿ ತಬ್ಬಿಕೊಂಡು, ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಪುಂಡರು…

56
firstsuddi

ಬೆಂಗಳೂರು: ರಾತ್ರಿ ವೇಳೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದ ಯುವತಿಯನ್ನು ನಾಲ್ವರು ಪುಂಡರು ತಬ್ಬಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.18 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಯುವತಿ ಮಧ್ಯರಾತ್ರಿ ವೇಳೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಳು. ಈ ವೇಳೆ ಕೋರಮಂಗಲ ಆಟೋ ನಿಲ್ದಾಣದ ಬಳಿ ಬಂದಿದ್ದ ನಾಲ್ವರು ಯುವಕರು, ಯುವತಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾರೆ. ಈ ವೇಳೆ ಯುವತಿ ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಇದನ್ನು ನೋಡಿದ ಯುವತಿಯ ಸ್ನೇಹಿತ ಯುವತಿಯ ಸಹಾಯಕ್ಕೆ ಬಂದಿದ್ದು, ಆತನ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ.

ನಂತರ, ಯುವತಿಯ ಬಾಯಿ ಮುಚ್ಚಿ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಕೆಟ್ಟದಾಗಿ ಸ್ಪರ್ಶ ಮಾಡಿದ್ದಾರೆ. ಇದಕ್ಕೆ ಯುವತಿ ತೀವ್ರ ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಯುವತಿ ಗಾಯಗೊಂಡಿದ್ದಾಳೆ. ನಂತರ, ಯುವಕ ರಕ್ಷಣೆಗಾಗಿ ಕೂಗಿಕೊಂಡಾಗ ಆತನಿಗೆ ಮತ್ತೆ ಥಳಿಸಿ ಅಲ್ಲಿಂದ ಇಬ್ಬರನ್ನೂ ಬಿಟ್ಟು ಪರಾರಿ ಆಗಿದ್ದಾರೆ. ಇನ್ನು ಗಾಯಗೊಂಡ ಯುವತಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ, ಆಡುಗೋಡಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.

ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.