ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಹೇಳಿದ ಶೋಭಾ ಕರಂದ್ಲಾಜೆ.

71
firstsuddi

ಬೆಂಗಳೂರು: ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ.