ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ ಪರಿಚ್ಛೇದ 8ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಹಮ್ಮಿಕೊಂಡಿತ್ತು.
ಕೆಪಿಸಿಸಿ ಕಚೇರಿಯಿಂದ ರ್ಯಾಲಿ ಆರಂಭಿಸಿ ರಾಜಭವನ ಮುತ್ತಿಗೆಗೆ ಯತ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ , ಸಲೀಂ ಅಹಮ್ಮದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.
ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.










