ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್.

64
firstsuddi

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೆಲ್ಫ್ ಕ್ವಾರಂಟೈನ್ ಗೊಳಗಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ಹಾಜರಾಗುವಂತೆ ನಿನ್ನೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತು ಅವರ ಪುತ್ರ, ಸಂಸದ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.