ಕಾಂಗ್ರೆಸ್ ಅಧ್ಯಕ್ಷ ರೇಸ್​ನಿಂದ ಹಿಂದೆ ಸರಿದ ಅಶೋಕ್ ಗೆಹ್ಲೋಟ್.

68
firstsuddi

ನವದೆಹಲಿ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಅಶೋಕ್ ಗೆಹ್ಲೋಟ್ ರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ಅವರೇ ಸೂಚಿಸಿದ್ದರು. ಇಡೀ ಗಾಂಧಿ ಕುಟುಂಬ ಕೂಡ ಬೆಂಬಲ ನೀಡಿತ್ತು. ಬಳಿಕ ನಡೆದ ಹೈಡ್ರಾಮಾದಿಂದ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಇದೀಗ ಗೆಹ್ಲೋಟ್ ಅವರೇ ಅಧಿಕೃತವಾಗಿ ತಾವು ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ರಾಜಸ್ಥಾನದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜ್ಯದಲ್ಲಿ ನಡೆದ ಘಟನೆಗಳಿಂದ ನನಗೆ ತೀವ್ರ ನೋವಾಗಿದೆ. ಈ ನೋವನ್ನು ನನ್ನ ಜೀವನದ ಉದ್ದಕ್ಕೂ ನಾನು ಅನುಭವಿಸುತ್ತೇನೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ನಂತರ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

ಅಶೋಕ್ ಗೆಹ್ಲೋಟ್ ಸ್ಪರ್ಧಾ ಕಣದಿಂದ ಹೊರಬೀಳುವ ಮೂಲಕ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಈಗ ಹಿರಿಯ ಕಾಂಗ್ರೆಸ್ ನಾಯಕರಾದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಮಾತ್ರ ಉಳಿದುಕೊಂಡಿದ್ದು, ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಮಧ್ಯೆ ಅಧ್ಯಕ್ಷ ಸ್ಥಾನಕ್ಕಾಗಿ ಪೈಟ್ ನಡೆಯಲಿದೆ.