ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಮನೆ ಮೇಲೆ ಮತ್ತೆ ಸಿಬಿಐ ದಾಳಿ.

50
firstsuddi

ಚೆನ್ನೈ : ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಮನೆ ಮೇಲೆ ಸಿಬಿಐ ಮತ್ತೆ ದಾಳಿ ನಡೆಸಿದೆ.

ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಲಾಗಿದೆ ಎಂದು ಆರೋಪಿಸಿ ಮೇ 17ರಂದು ಕಾರ್ತಿ ಚಿದಂಬರಂ ಅವರಿಗೆ ಸೇರಿದ ಮುಂಬೈ ಮತ್ತು ಚೆನ್ನೈನಲ್ಲಿರುವ ಮನೆ ಹಾಗೂ ಕಚೇರಿ ಸೇರಿ 9 ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸಿತ್ತು. ಈ ವೇಳೆ ಚೆನ್ನೈನ ನುಂಗಂಬಾಕ್ಕಂನಲ್ಲಿರುವ ಕಾರ್ತಿ ಚಿದಂಬರಂ ಅವರ ಮನೆ ಕೀ ನಾಪತ್ತೆಯಾಗಿದ್ದರಿಂದ ಸಿಬಿಐ ಅಧಿಕಾರಿಗಳು ಅದನ್ನು ತೆರೆಯಲು ಸಾಧ್ಯವಾಗಿರಲಿಲ್ಲ. ಇದೀಗ ಸಿಬಿಐ ತಂಡ ಲಂಡನ್ ನಲ್ಲಿರುವ ಕಾರ್ತಿ ಚಿದಂಬರಂ ಅವರಿಂದ ಕೀ ಪಡೆದು ಪರಿಶೀಲನೆ ನಡೆಸುತ್ತಿದೆ.