ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ ಎಫ್ಐಆರ್ ದಾಖಲು…

62
firstsuddi

ಕಲಬುರಗಿ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೆಲದಿನಗಳ ಹಿಂದೆ ಹಿಜಾಬ್ ತಂಟೆಗೆ ಬಂದರೆ ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದವು. ಪ್ರತಿಭಟನೆ ಬಳಿಕ ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಹಿನ್ನೆಲೆ ಐಪಿಸಿ ಸೆಕ್ಷನ್ (153), (294) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.