ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಅವರು ಕೊರೊನಾಗೆ ಬಲಿ…

92
firstsuddi

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಡಾ. ಅಶೋಕ್ ಕುಮಾರ್ ವಾಲಿಯಾ(72) ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ವೃತ್ತಿಯಲ್ಲಿ ಮೂಲತಃ ವೈದ್ಯರಾಗಿದ್ದ ಡಾ.ಅಶೋಕ್ ಕುಮಾರ್ ವಾಲಿಯಾ ಅವರು ನಂತರ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. ಡಾ ಅಶೋಕ್ ಕುಮಾರ್ ವಾಲಿಯಾ ಅವರು ಲಕ್ಷ್ಮಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ. ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿ ಆಗಿದ್ದಾಗ ನಗರಾಭಿವೃದ್ಧಿ ಸಚಿವರಾಗಿ, ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.