ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು…

176
firstsuddi

ಮಂಗಳೂರು : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಬೆಳಿಗ್ಗೆ ಯೋಗ ಮಾಡುವ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡಿಸ್ ಅವರು ಜಾರಿ ಬಿದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು. ಅದೇ ದಿನ ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ವೇಳೆ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ತಲೆಭಾಗದಲ್ಲಿ ಪೆಟ್ಟಾಗಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.