ಕಾಡಾನೆ ದಾಳಿಗೆ ಇಬ್ಬರು ಬಲಿ…

67
firstsuddi

ಕೋಲಾರ: ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಇಂದು ಕೋಲಾರ ಹಾಗೂ ಆಂಧ್ರದ ಗಡಿ ಭಾಗದ ಚಿತ್ತೂರಲ್ಲಿ ನಡೆದಿದೆ.

ಆಂಧ್ರಪ್ರದೇಶಕ್ಕೆ ಸೇರಿರುವ ಚಿತ್ತೂರಿನ ಪತಿಚೇನು ಗ್ರಾಮದ ಓರ್ವ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬುವ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿದೆ. ದಾಳಿಗೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅರಣ್ಯ ಇಲಾಖೆಗೆ ಆನೆಗಳ ಹಾವಳಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಎರಡು ರಾಜ್ಯಗಳ ಗಡಿ ಗ್ರಾಮಗಳಲ್ಲಿ ಆನೆ ಹಾವಳಿಯಿಂದಾಗಿ ಗ್ರಾಮಸ್ಥರು ಮನೆಯಿಂದ ಆಚೆ ಬರಲು ಕೂಡ ಆತಂಕ ಪಡುವಂತಾಗಿದೆ. ಈ ಬಗ್ಗೆ ಇಲಾಖೆ ಸೂಕ್ತ ಕ್ರಮ ಕೈಗೊಂಡು ಆನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಗಡಿ ಭಾಗದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.