ಕಾಡಾನೆ ದಾಳಿಗೆ ವ್ಯಕ್ತಿ ಸಾವು…

55
firstsuddi

ಚಾಮರಾಜನಗರ: ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೃತನನ್ನು ಪಿ.ಜಿ ಪಾಳ್ಯ ಸಮೀಪದ ಮಾಳಿಗನತ್ತ ಗ್ರಾಮದ ಪ್ರಭುಸ್ವಾಮಿ ಎಂದು ಗುರುತಿಸಲಾಗಿದೆ. ಮೃತ ಪ್ರಭುಸ್ವಾಮಿ ತನ್ನ ಪುತ್ರ ಚಂದ್ರುವಿನ ಜೊತೆ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆ ಮಹದೇಶ್ವರ ವನ್ಯಜೀವಿ ವಲಯದ ಆಲದಕೆರೆ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಅಪ್ಪ ಒಂದು ಭಾಗದಲ್ಲಿ ಮಗ ಮತ್ತೊಂದು ಭಾಗದಲ್ಲಿ ಕಡ್ಡಿ ಕೀಳುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಪರಿಣಾಮ ಪ್ರಭುಸ್ವಾಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪ್ರಾಣಾಪಾಯದಿಂದ ಪಾರಾದ ಮಗನಿಂದ ಘಟನೆ ಬೆಳಕಿಗೆ ಬಂದಿದೆ.

ಮೃತ ದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ಅರಣ್ಯ ಇಲಾಖಾ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.