ಕಾಡಾನೆ ದಾಳಿಗೆ 63 ವರ್ಷದ ಮಹಿಳೆ ಬಲಿ…

76
firstsuddi

ಕೊಡಗು: ಕಾಡಾನೆ ದಾಳಿಗೆ 63 ವರ್ಷದ ಮಹಿಳೆಯೊಬ್ಬರು ಬಲಿಯಾಗಿರುವಂತಹ ಘಟನೆ ನಿನ್ನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ.

ಆಯಿಶಾ(63) ಮೃತ ದುರ್ದೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಆನೆ ತುಳಿತದ ಪರಿಣಾಮ ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಜಿಲ್ಲೆಯಲ್ಲಿ ಪದೇ ಪದೇ ಕಾಡಾನೆ ದಾಳಿಯಿಂದ ಬೇಸತ್ತಿರುವ ಸಿದ್ದಾಪುರ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಮಾನವ-ಪ್ರಾಣಿ ಸಂಘರ್ಷ ನಿವಾರಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಆರೋಪಿಸಿದರು. ಅಲ್ಲದೆ, ಪುಂಡಾನೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದರು.