ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಕಾಡು ಮನುಷ್ಯ : ಸಿದ್ದರಾಮಯ್ಯ.

166
firstsuddi

ಬೆಂಗಳೂರು : ಉಪಚುನಾವಣೆ ಬಳಿಕ ಬಂಡೆ ಛಿದ್ರವಾಗುತ್ತೆ, ಹುಲಿಯಾ ಕಾಡಿಗೆ ಹೋಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ ಎಂದು ನಳಿನ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ.
ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ”.
ಬಿಜೆಪಿ ರಾಜ್ಯಾಧ್ಯಕ್ಷ ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ.
ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ.
ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.
ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ವಾಗ್ದಾಳಿ ನಡೆಸಿದ್ದಾರೆ.