ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ – ವಕೀಲ ರಾಜೇಶ್ ಭಟ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ…

67
firstsuddi

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಪೊಲೀಸರು ಮಂಗಳೂರಿನ ಜೆಎಂಎಫ್ ಸಿ ಮೂರನೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

25 ಸೆಪ್ಟಂಬರ್ 2021ರಂದು ಮಧ್ಯಾಹ್ನ ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್‌ಶಿಪ್‌ ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಅಷ್ಟೇ ಅಲ್ಲ ಆಕೆಗೆ ಜೀವಬೆದರಿಕೆ ಹಾಕಿದ್ದ. ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ತುಂಬಾ ದಿನಗಳವರೆಗೆ ತಲೆ ಮರೆಸಿಕೊಂಡಿದ್ದನು. ಬಳಿಕ ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದನು. ಆತನಿಗೆ ಅನಂತ ಭಟ್ ಮತ್ತು ಅಚ್ಯುತ ಭಟ್ ಆಶ್ರಯ ಒದಗಿಸಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.