ಪ್ಯಾರಿಸ್ : ಉಕ್ರೇನ್ ನಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ವಿರುದ್ಧ ಮಹಿಳೆಯೊಬ್ಬಳು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿರುವ ಘಟನೆ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರೆಡ್ ಕಾರ್ಪೆಟ್ ಮುಂದೆ ಛಾಯಾಗ್ರಾಹಕರು ನೆರೆದಿದ್ದರು. ಈ ವೇಳೆ ಮಹಿಳೆಯೊಬ್ಬಳು ಕಿರುಚುತ್ತಾ ತನ್ನ ಎಲ್ಲಾ ಬಟ್ಟೆಗಳನ್ನು ಬಿಚ್ಚಿಟ್ಟು ಅರೆಬೆತ್ತಲೆ ಪ್ರತಿಭಟನೆ ಕೈಗೊಂಡಿದ್ದಾಳೆ. ಎಚ್ಚೆತ್ತ ಸೆಕ್ಯುರಿಟಿ ಗಾರ್ಡ್ ಗಳು ಆಕೆಯ ದೇಹವನ್ನು ಕೋಟ್ ನಿಂದ ಮುಚ್ಚುತ್ತಿರುವುದು ಕಂಡುಬಂದಿದೆ.
ಮಹಿಳೆಯೂ ಆಕೆಯ ಎದೆಯ ಮೇಲೆ ಉಕ್ರೇನ್ ಧ್ವಜದ ನೀಲಿ ಮತ್ತು ಹಳದಿ ಬಣ್ಣದಲ್ಲಿ ‘ನಮ್ಮ ಮೇಲಿನ ಅತ್ಯಾಚಾರ ನಿಲ್ಲಿಸಿ’ ಎಂದು ಬರೆದುಕೊಂಡಿದ್ದಾಳೆ. ಮಹಿಳೆ ಕೆಳ ಬೆನ್ನಿನ ಮೇಲೆ ಮತ್ತು ಕಾಲುಗಳ ಮೇಲೆ ಕೆಂಪು ಬಣ್ಣ ಕಂಡು ಬಂದಿದೆ.
ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ನಾಲ್ಕನೇ ದಿನದಂದು ಜಾರ್ಜ್ ಮಿಲ್ಲರ್ ಅವರ ತ್ರೀ ಥೌಸಂಡ್ ಇಯರ್ಸ್ ಆಫ್ ಲಾಂಗಿಂಗ್ ನ ಪ್ರಥಮ ಪ್ರದರ್ಶನದ ಸಂದರ್ಭದಲ್ಲಿ ಮಹಿಳೆ ಈ ರೀತಿ ಪ್ರತಿಭಟನೆ ಮಾಡಿದ್ದಾಳೆ. ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ನಿರ್ದೇಶಕರು ಮತ್ತು ತಾರೆಯರು ಹಾಜರಿದ್ದರು.










