ಕಾಫಿನಾಡಿನಲ್ಲಿ ಮತ್ತೆ ಕೊರೊನಾ ಸ್ಫೋಟ – 10 ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಪಾಸಿಟಿವ್…

64
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, ಖಾಸಗಿ ಶಾಲೆಯ ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10 ಜನ ವಿದ್ಯಾರ್ಥಿಗಳಲ್ಲಿ ಹಾಗೂ ಓರ್ವ ಶಿಕ್ಷಕರಲ್ಲಿ ಕೋವಿಡ್ ಪತ್ತೆಯಾಗಿದೆ. ಈ ಹಿನ್ನೆಲೆ ಶಾಲೆಯಲ್ಲಿನ ಉಳಿದ ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆಯನ್ನು ನಡೆಸಲು ಸೂಚಿಸಲಾಗಿದ್ದು, ಶಾಲೆಯನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಕೆ. ಎಂ. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮನೆಯಲ್ಲೇ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ವಾರದ ಹಿಂದಷ್ಟೇ ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಗ್ರಾಮದ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ದಿನದಿಂದ ದಿನಕ್ಕೆ ಈ ರೀತಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಫಿನಾಡಿನ ಜನರ ಆತಂಕಕ್ಕೆ ಕಾರಣವಾಗಿದೆ.