ಕಾಫಿನಾಡು ಚಿಕ್ಕಮಗಳೂರಿಗೆ ಶುಭ ಸುದ್ದಿ-ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೊರೊನಾ ಮುಕ್ತ…

243

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇದುವರೆಗೆ ದಾಖಲಾಗಿದ್ದ ಎಲ್ಲಾ ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಜಿಲ್ಲೆ ಮತ್ತೆ ಕೊರೊನಾ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವೆರೆಗೆ ದಾಖಲಾಗಿದ್ದ 18 ಕೊರೊನಾ ಪ್ರಕರಣಗಳ ಪೈಕಿ 2 ಪ್ರಕರಣ ಫಾಲ್ಸ್ ಪಾಸಿಟಿವ್ ಬಂದಿದ್ದು, ಉಳಿದ 16 ಮಂದಿ ಸೋಂಕಿತರಲ್ಲಿ ಕಳೆದ ವಾರ 8ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಹಾಗೂ ಇಂದು ಉಳಿದ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಎಲ್ಲಾ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಪತ್ತೆಯಾಗಿದ್ದ 16 ಮಂದಿ ಸೋಂಕಿತರು ಹೊರ ರಾಜ್ಯದಿಂದ ಬಂದವರಾಗಿದ್ದು, ಇದೀಗ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗದೆ ಇರುವುದರಿಂದ ಜಿಲ್ಲೆ ಮತ್ತೆ ಕೊರೊನಾ ಮುಕ್ತವಾದಂತಾಗಿದೆ ಎಂದು ತಿಳಿಸಿದ್ದಾರೆ.