ಕಾಬೂಲ್‍ನಲ್ಲಿ ಭೂಕಂಪನ – 4.3 ತೀವ್ರತೆ ದಾಖಲು…

41
firstsuddi

ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ.

ಇಂದು ಮುಂಜಾನೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ಕಾಬೂಲ್ ನ 85 ಕಿ.ಮೀ ಸುತ್ತಳತೆಯಲ್ಲಿ ಭೂಮಿಯ ಮೇಲ್ಮೈಯಿಂದ ಕೇವಲ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ ತಿಳಿಸಿದೆ.

ಘಟನೆಯಲ್ಲಿ ಯಾವುದೇ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸೋಮವಾರ ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿತ್ತು.