ಕಾಬೂಲ್‌ನ ಮಸೀದಿಯಲ್ಲಿ ಬಾಂಬ್ ಸ್ಫೋಟ – 20 ಮಂದಿ ಸಾವು…

59
firstsuddi

ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿವೆ.