ಕಾಮಗಾರಿಗೆ ಅಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು…

60
firstsuddi

ಕೊಪ್ಪಳ : ಕಾಮಗಾರಿಗೆ ಅಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ಇಲ್ಲಿನ ಹೊಸಪೇಟೆ ರಸ್ತೆಯಲ್ಲಿರುವ ಕೆಎಸ್ ಆಸ್ಪತ್ರೆಯ ಬಳಿ ನಡೆದಿದೆ.

ಶ್ರೀದೇವಿ(15) ಮೃತ ಬಾಲಕಿ. ಆಸ್ಪತ್ರೆ ಪಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಅಗೆಯಲಾಗಿದ್ದ ಗುಂಡಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ತುಂಬಿಕೊಂಡಿತ್ತು. ಬಾಲಕಿಯ ತಂದೆ ಶಂಭುಲಿಂಗಯ್ಯ ಪಾನ್‌ಶಾಪ್ ನಡೆಸುತ್ತಿದ್ದರು. ಮಂಗಳವಾರ ಪಾನ್‌ಶಾಪ್‌ಗೆ ಬಂದು ವಾಪಸ್ ಮನೆಗೆ ಹೋಗುತ್ತಿದ್ದ ಬಾಲಕಿ ಆಯತಪ್ಪಿ ಗುಂಡಿಯೊಳಗೆ ಬಿದ್ದಿದ್ದಾಳೆ. ಸಂಜೆಯಾದರೂ ಮಗಳು ಮನೆಗೆ ಬರಲಿಲ್ಲವೆಂದು ಕುಟುಂಬದವರು ಇಡೀ ಊರೆಲ್ಲಾ ಹುಡುಕಾಡಿದ್ದಾರೆ. ಆದರೂ ಮಗಳು ಸಿಕ್ಕಿರಲಿಲ್ಲ.

ನಂತರ ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಕೈಗೊಂಡಿದ್ದ ಪೊಲೀಸರು ಸಿಸಿಟಿವಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಬಾಲಕಿ ಗುಂಡಿಗೆ ಬಿದ್ದಿರುವುದು ಗೊತ್ತಾಗಿ, ನಿನ್ನೆ ಶವ ಪತ್ತೆಹಚ್ಚಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.