ಕಾರಿಗೆ ಟಿಪ್ಪರ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು…

44
firstsuddi

ಶಿವಮೊಗ್ಗ : ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಬಳಿಕ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.

ಭದ್ರಾವತಿ ನಗರದ ನಿವಾಸಿಗಳಾದ ಷಣ್ಣುಗ್ (39) ಮತ್ತು ರಾಮಚಂದ್ರ (40) ಮೃತ ದುರ್ದೈವಿಗಳು. ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿ ಆಗಿದ್ದಾನೆ. ಸದ್ಯ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.