ಕಾರಿನ ಮೇಲೆ ಬಿದ್ದ ಟ್ರೈಲರ್ ಲಾರಿ ; ಮೂರು ಮಂದಿ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ…

212
firstsuddi

ಉಪ್ಪಿನಂಗಡಿ: ನಿಯಂತ್ರಣ ತಪ್ಪಿದ ಟ್ರೈಲರ್ ಲಾರಿಯೊಂದು ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಬಳಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಮಂಡ್ಯ ನಿವಾಸಿಗಳಾದ ನೀತು (35), ನಿಧಿ (15) ಹಾಗು ನಾರಾಯಣ (66) ಮೃತರು ಎಂದು ಗುರುತಿಸಲಾಗಿದ್ದು, ಚಂದ್ರಶೇಖರ್ ಹಾಗು ಕಾವೇರಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಕಬ್ಬಿಣದ ಪೈಪ್ ಗಳನ್ನು ಹೊತ್ತುಕೊಂಡು ಬರುತ್ತಿದ್ದ ಲಾರಿ ಉದನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂರು ಮಂದಿ ಮೃತಪಟ್ಟಿದ್ದಾರೆ