ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿಳಿಕೆರೆ ಸಮೀಪದ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತರು ಕಾರಿನಲ್ಲಿ ಮೈಸೂರಿನಿಂದ ಹುಣಸೂರು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ವೇಳೆ ಹುಣಸೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಕೇರಳ ಮೂಲದ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಿಳಿಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










