ಉಡುಪಿ: ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಆಟೊ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಆತ್ರಾಡಿಯಲ್ಲಿ ನಡೆದಿದೆ. ಮೃತರನ್ನು ಪಾದಚಾರಿ ಆತ್ರಾಡಿ ನಿವಾಸಿ ಮಾಧವ ಶೆಟ್ಟಿಗಾರ್(60) ಹಾಗೂ ಆಟೋ ರಿಕ್ಷಾ ಚಾಲಕ ವಸಂತ ನಾಯಕ್(28) ಎಂದು ಗುರುತಿಸಲಾಗಿದೆ. ಮಾಧವ ಶೆಟ್ಟಿಗಾರ್‌ಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದಿದ್ದು, ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










