ಕಾರು-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು…

73
firstsuddi

ಹುಬ್ಬಳ್ಳಿ : ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ.

ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಬಸ್ ಬರುತ್ತಿತ್ತು. ಮತ್ತೊಂದು ಕಡೆ ಹುಬ್ಬಳ್ಳಿಯಿಂದ ಹಂಪಿ ಕಡೆಗೆ ಕಾರು ಹೊರಟಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಬಸ್ ನ ವೇಗ ಹೆಚ್ಚಾಗಿದ್ದರಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೂ ಕಾರಿನಲ್ಲಿದ್ದ ಮೂರ್ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ.

ಇನ್ನೂ ಅಪಘಾತಕ್ಕೆ ಖಾಸಗಿ ಬಸ್ ಚಾಲಕ ರಾಂಗ್ ರೂಟ್ ನಲ್ಲಿ ಬಂದಿರುವುದೇ ಕಾರಣ ಎನ್ನಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.