ಕಾರು- ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ದುರ್ಮರಣ…

55
firstsuddi

ತುಮಕೂರು : ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.

ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಇನ್ನು ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.