ತುಮಕೂರು : ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ.
ರಘು(27) ಸಂತೋಷ (21) ಮೃತ ದುರ್ದೈವಿಗಳು. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಧರ್ಮಸ್ಥಳಕ್ಕೆ ಟಿ.ಟಿ. ವಾಹನ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಚಿಕ್ಕಮಗಳೂರಿನಿಂದ- ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ಕಾರೊಂದು ಡಿವೈಡರ್ ದಾಟಿ ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










