ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-ನಾಲ್ವರು ಸಜೀವ ದಹನ…

139
firstsuddi

ಪಂಜಾಬ್ : ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಜೀವ ದಹನವಾಗಿರುವ ಘಟನೆ ಸಂಗ್ರೂರ್ ನಗರದ ಸುನಮ್ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಸುನಮ್ ಬೈಪಾಸ್ ಬಳಿ ಟ್ರಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಟ್ರಕ್ ನ ಡೀಸೆಲ್ ಟ್ಯಾಂಕ್ ಹೊಡೆದು ಡೀಸೆಲ್ ಚೆಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಕಾರಿನಲ್ಲಿದ್ದವರು ಗ್ಲಾಸ್ ತೆರೆಯಲು ಎಷ್ಟೇ ಪ್ರಯತ್ನಿಸಿದರೂ ಆಗದ ಕಾರಣ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.