ಕಾರವಾರ : ಮಹಿಳಾ ಕಾರ್ಮಿಕರನ್ನು ಸಾಗಿಸುತ್ತಿದ್ದ ತೂಫಾನ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಕುಮಟ ತಾಲ್ಲೂಕಿನ ಖೈರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ.
ಕುಷ್ಟಗಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ತೆರಳುತ್ತಿದ್ದರು. ವಾಹನ ಚಾಲಕ ಅತೀ ವೇಗದಿಂದ ವಾಹನ ಚಲಾಯಿಸಿರುವುದು ಘಟನೆಗೆ ಕಾರಣವಾಗಿದೆ. ಘಟನೆಯಲ್ಲಿ ವಾಹನದ ಚಾಲಕ ಸೇರಿ 14 ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ವಿನ ಚಿಕಿತ್ಸೆಗಾಗಿ ಮಣಿಪಾಲ್ ಗೆ ರವಾನಿಸಲಾಗಿದೆ. ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










