ಕಾಲು ಜಾರಿ ಬಾವಿಯಲ್ಲಿ ಬಿದ್ದು ಪ್ರಿಯಕರ ಸಾವು.. ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ…

74
firstsuddi

ಕಲಬುರಗಿ : ಕಾಲು ಜಾರಿ ಬಾವಿಯಲ್ಲಿ ಬಿದ್ದು ಪ್ರಿಯಕರ ಸಾವನ್ನಪ್ಪಿದ್ದರೆ, ಮನನೊಂದ ಯುವತಿ ನೇಣಿಗೆ ಕೊರಳೊಡ್ಡಿದ ಘಟನೆ ನಗರದಲ್ಲಿ ನಡೆದಿದೆ.

ನಗರದ ಪಿಡಬ್ಲ್ಯೂಡಿ ಕ್ವಾಟರ್ಸ್ ನಿವಾಸಿ ಶೃತಿ (18) ಆತ್ಮಹತ್ಯೆಗೆ ಶರಣಾದ ಯುವತಿ. ದ್ವೀತಿಯ ಪಿಯುಸಿ ಓದುತ್ತಿದ್ದ ಶೃತಿ, ಸಂಬಂಧಿಯಾದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ನಿವಾಸಿ ಹನುಮಂತ ಎಂಬಾತನನ್ನು ಪ್ರೀತಿಸುತ್ತಿದ್ದಳು. ಪೋಷಕರು ಸಹ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ರು. ಆದರೆ ಹನುಮಂತ ವಿಧಿಯ ಕ್ರೂರ ಆಟಕ್ಕೆ ಬಲಿಯಾಗಿದ್ದಾನೆ.

ಕಳೆದ ಒಂದು ತಿಂಗಳ ಹಿಂದೆ ಹನುಮಂತ ಬಸವನಬಾಗೇವಾಡಿಯಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿ ಮಾಡ್ತಿದ್ದ ಹನಮಂತನ ಸಾವಿನಿಂದ ಮನನೊಂದಿದ್ದ ಶೃತಿ ಆಹಾರ ತ್ಯಜಿಸಿದ್ದಳು. ನಿನ್ನೆ ಸಂಜೆ ಮನೆಯ ಬಾಗಿಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.