ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

134
firstsuddi

ಮಂಡ್ಯ : ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಜೀವನದಿ ಕಾವೇರಿ ತುಂಬಿ ಹರಿಯುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಡ್ಯಾಂ ಬಳಿ ಇಂದು ನಡೆದ ಕಾವೇರಿ ತಾಯಿಗೆ ಬಾಗಿನ ಅರ್ಪಿಸುವ ಪೂಜೆಯಲ್ಲಿ ಭಾಗಿಯಾಗಿ ಬಳಿಕ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು 5ನೇ ಬಾರಿ ಕೆ.ಆರ್.ಎಸ್ ನಲ್ಲಿ ಬಾಗಿನ ಅರ್ಪಿಸಿದ್ದೇನೆ. ಇದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಮುಖ್ಯಮಂತ್ರಿಗಳಿಗೆ ಸಚಿವರಾದ ಎಸ್.ಟಿ. ಸೋಮಶೇಖರ್, ನಾರಾಯಣ ಗೌಡ, ರಮೇಶ್ ಜಾರಕಿಹೊಳಿ ಹಾಗೂ ಸಂಸದರಾದ, ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ, ಶಾಸಕರಾದ ಅನ್ನದಾನಿ, ಶ್ರೀಕಂಠಯ್ಯ, ಹಾಗೂ ರವೀಂದ್ರ ಅವರು ಸಾಥ್ ನೀಡಿದರು.