ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು…

55
firstsuddi

ಚಾಮರಾಜನಗರ: ಕಾವೇರಿ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿಯೊಬ್ಬ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರದ ಜಿರೋ ಪಾಯಿಂಟ್ ಗೇಟ್ ಬಳಿ ನಡೆದಿದೆ.

ಪುನೀತ್ ಕುಮಾರ್ (18) ಮೃತ ವಿದ್ಯಾರ್ಥಿ. ಬೆಂಗಳೂರಿನ ಸುರಾನ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ಪುನೀತ್, ನಿನ್ನೆ ತನ್ನ ಸ್ನೇಹಿತರಾದ ಲೋಹಿತ್, ತೇಜಸ್ವಿನಿ, ರಿಷಾ ಎಂಬುವವರ ಜೊತೆ ಶಿವನ ಸಮುದ್ರಕ್ಕೆ ಪ್ರವಾಸಕ್ಕೆ ಬಂದಿದ್ದ. ಈ ವೇಳೆ ಪುನೀತ್, ನೀರಿನಲ್ಲಿ ಈಜಲು ತೆರಳಿದ್ದು ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಮೃತ ದೇಹವನ್ನು ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ಈ ಸಂಬಂಧ ಕೊಳ್ಳೆಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.