ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮಗು ಹಾಗೂ ಯುವಕ ನೀರುಪಾಲು…

212
firstsuddi

ಮಂಡ್ಯ : ಕಾವೇರಿ ಸಂಗಮಕ್ಕೆ ಪ್ರವಾಸಕ್ಕೆ ಬಂದಿದ್ದ ಇಬ್ಬರು ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ  ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಮ್ ಸಮೀಪದ ಕಾವೇರಿ ಸಂಗಮದಲ್ಲಿ ನಡೆದಿದೆ. ಸಲೀಂ(20) ಮುನಾನ್(3) ನೀರಲ್ಲಿ ಕೊಚ್ಚಿ ಹೋಗಿದ್ದು, ಕಾವೇರಿ ಸಂಗಮಕ್ಕೆ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಬಂದಿದ್ದ ವೇಳೆ ಮಗು ಮುನಾನ್ ನದಿ ನೀರಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ನೀರಲ್ಲಿ ಕೊಚ್ಚಿ ಹೋಗುತ್ತಿತ್ತು. ಈ ವೇಳೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ರಕ್ಷಿಸಲು ನೀರಿಗೆ ಧುಮುಕಿದ ಸಲೀಂ ಕೂಡಾ ನೀರು ಪಾಲಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.