ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು…

97
firstsuddi

ಮಂಡ್ಯ : ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ಇರುವ ಇಸ್ಕಾನ್‍ನ ಫಾರ್ಮ್ ಹೌಸ್‍ನಲ್ಲಿ ನಡೆದಿದೆ. ನೀರುಪಾಲಾದವರನ್ನು ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ಆರ್.ಎಸ್. ದಾಸ್(43) ಹಾಗೂ ಚಿತ್ರದುರ್ಗದ ನಿವಾಸಿ ಗುಣಾರನವ ದಾಸ್(35) ಎಂದು ಗುರುತಿಸಲಾಗಿದೆ. ಇವರಿಬ್ಬರು ಮೈಸೂರಿನ ಇಸ್ಕಾನ್ ದೇವಸ್ಥಾನದಲ್ಲಿ ದೀಕ್ಷೆ ಪಡೆದಿದ್ದರು ಎನ್ನಲಾಗಿದ್ದು, ಆಹಾರ ಸೇವೆಗೆ ಮುನ್ನ ಸ್ನಾನ ಮಾಡಲು ತೆರಳಿದ್ದ ವೇಳೆ ನದಿಯಲ್ಲಿ ಕೊಚ್ಚಿ ಹೋಗಿದ್ದು, ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧಕಾರ್ಯ ನಡೆಸುತ್ತಿದ್ದು, ಈ ಕುರಿತು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.