ನವದೆಹಲಿ : ಕಿವುಡ ಮತ್ತು ಮೂಕ ಮಹಿಳೆಯೊಬ್ಬಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 22 ರಿಂದ 34 ವರ್ಷದ ರೆಹಾನ್ ಎಂಬ ವ್ಯಕ್ತಿ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಭಾನುವಾರ ಭಜನಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದಾಳೆ.
ಸಂತ್ರಸ್ತೆಗೆ ಮತು ಬಾರದ ಹಾಗೂ ಕಿವಿ ಕೇಳದ ಕಾರಣ ವ್ಯಾಖ್ಯಾನಕಾರರ ನೆರವಿನೊಂದಿಗೆ ಭಾಜನಪುರ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಮಹಿಳೆಯ ದೂರಿನ್ವಯ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ರೆಹಾನ್ ಅನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.










