ಕುಕ್ಕರ್ ನಿಂದ ಹೊಡೆದು ಪ್ರಿಯತಮೆಯನ್ನೇ ಕೊಂದ ಪ್ರಿಯತಮ…

84
firstsuddi

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ನಡೆದಿದೆ.

ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ. ಸದ್ಯ ಆರೋಪಿ ವೈಷ್ಣವ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ವೈಷ್ಣವ್-ದೇವಾ ಇಬ್ಬರೂ ಕೆಲ ವರ್ಷಗಳಿಂದ ಲೀವಿಂಗ್ ಟುಗೇದರ್​ನಲ್ಲಿದ್ದರು. ಕಾಲೇಜು ದಿನಗಳಿಂದ ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದ ಈ ಜೋಡಿ ಕೆಲಸ ಸಿಕ್ಕ ಹಿನ್ನೆಲೆ ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ನೆಲೆಸಿದ್ದರು.

ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್ ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ. ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.