ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ…

20
firstsuddi

ಮಂಗಳೂರು : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ.

ಮುಜರಾಯಿ ಇಲಾಖೆ ಸುಪರ್ದಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ದೇವಸ್ಥಾನದ ಜಾತ್ರೆಗಳಲ್ಲಿ ಮೊದಲಿನಿಂದಲೂ ಜಾತಿ ಮತ್ತು ಧರ್ಮ ಭೇದವಿಲ್ಲದೆ ವರ್ತಕರು ಅಂಗಡಿಗಳನ್ನು ಹಾಕಿ, ವ್ಯಾಪಾರ ಮಾಡುತ್ತಿದ್ದರು. ಆದರೆ ಈ ಬಾರಿ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.

ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಬ್ಯಾನರ್ ನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲದೇ ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಸಂದರ್ಭದಲ್ಲಿ ಹಿಂದೂಗಳಲ್ಲದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸ್ ಠಾಣೆಗೂ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ. ಇದು ಚರ್ಚೆಗೆ ವೇದಿಕೆಯಾಗಿದ್ದು ಪರ-ವಿರೋಧಗಳು ಆರಂಭಗೊಂಡಿದೆ.