ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಸುದೀಪ್.

83
firstsuddi

ಮಂಗಳೂರು : ಸ್ಯಾಂಡಲ್ವುಡ್ ನಟ ಸುದೀಪ್ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪತ್ನಿ ಪ್ರಿಯಾ ಜೊತೆ ಕ್ಷೇತ್ರಕ್ಕೆ ಆಗಮಿಸಿದ ಸುದೀಪ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಸುದೀಪ್ ಸದ್ಯ, ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.