ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಪಾಸಿಟಿವ್…!

84
firstsuddi

ಬೆಂಗಳೂರು : ಕುಣಿಗಲ್ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ರಂಗನಾಥ್ ಅವರು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ ಕಾರ್ಯಕ್ರಮದ ಸಿದ್ಧತೆಯ ಸಂಪೂರ್ಣ ಜವಾಬ್ದಾರಿಯನ್ನು ಇವರೇ ವಹಿಸಿಕೊಂಡಿದ್ದರು ಎನ್ನಲಾಗಿದ್ದು, ಹೀಗಾಗಿ ಕಾಂಗ್ರೆಸ್ ನಾಯಕರಲ್ಲಿ ಆತಂಕ ಹೆಚ್ಚಿಸಿದೆ.