ಕುಮಾರಸ್ವಾಮಿ ಅವರು ಮೂರ್ಖ ಮುಖ್ಯಮಂತ್ರಿ, ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ : ಬಿ.ಎಸ್. ಯಡಿಯೂರಪ್ಪ

339
firstsuddi

ಗದಗ : ಚುನಾವಣಾ ಪ್ರಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೂರ್ಖ ಮುಖ್ಯಮಂತ್ರಿ, ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರೇ ಗೆಲ್ಲುತ್ತಾರೆ ಎಂದು ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸೇನೆ ಹಾಗೂ ಸೈನಿಕರ ಬಗ್ಗೆ ಯಾವುದೇ ರೀತಿಯ ಗೌರವ ಇಲ್ಲದೇ ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲು ಅಯೋಗ್ಯರು. ಲೋಕಸಭಾ ಚುನಾವಣೆಯ ಬಳಿಕ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.