ಕುರಿ ತೊಳೆಯಲು ಹೋಗಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವು…

69
firstsuddi

ರಾಮನಗರ: ಕುರಿ ತೊಳೆಯಲು ಹೋಗಿ ಒಂದೇ ಕುಟುಂಬದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆಗೆ ಮುಂದಾದರು. ಈ ವೇಳೆ ಇಬ್ಬರ ಮೃತದೇಹಗಳನ್ನು ಹೊರ ತೆಗೆದಿದ್ದು ಮತ್ತೊಬ್ಬರ ಶವ ಹೊರತೆಗೆಯಲು ಶೋಧಕಾರ್ಯ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.