ಕೂಲಿ ಕೆಲಸಕ್ಕೆಂದು ಹೋಗಿದ್ದ ಮಹಿಳೆಯರಿಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ…

27
firstsuddi

ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ತಾಜ ಸುಲ್ತಾನಪುರ ನಿವಾಸಿಗಳಾದ ಶರಣಮ್ಮ (45) ಹಾಗೂ ಚಂದಮ್ಮ (45) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಬೆಳಗ್ಗೆ ಶರಣಮ್ಮ ಮತ್ತು ಚಂದಮ್ಮ ಕೂಲಿ ಕೆಲಸಕ್ಕೆಂದು ಹೋಗಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನೂ ಕೊಲೆಗೆ ಕಾರಣ ತಿಳಿದು ಬಂದಿಲ್ಲ, ಇದೇ ರಸ್ತೆಯಲ್ಲಿ ತೆರಳುತ್ತಿದ್ದ ರೈತರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.