ಲಕ್ನೋ : ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಮಥುರಾ ನ್ಯಾಯಾಲಯ ಅನುಮತಿಸಿದೆ.
ಮಥುರಾ ಶ್ರೀಕೃಷ್ಣನ ಜನ್ಮ ಸ್ಥಳವಾಗಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಹಿಂದೂ ಸಂಘಟನೆಗಳು ದಾಖಲಿಸಿರುವ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಈ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.










