ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವರು ತಮ್ಮ ಅವಳಿ ಮಕ್ಕಳಿಗೆ ಕೃಷ್ಣನ ಅವತಾರ ತೊಡಿಸಿ ಮಸ್ತ್ ಆಗಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಮಕ್ಕಳ ಮುದ್ದಾದ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಅವಳಿ ಮಕ್ಕಳಿಗೆ ಬಿಳಿ ಪಂಚೆ ತೊಡಿಸಿ ಕೃಷ್ಣನ ಗೆಟಪ್‌ನಲ್ಲಿ ರೆಡಿ ಮಾಡಿದ್ದರೆ, ನೀಲಿ ಬಣ್ಣದ ಸೀರೆಯುಟ್ಟು ಸಿಂಪಲ್ ಆಭರಣ ಧರಿಸಿ ನಟಿ ಕಂಗೊಳಿಸುತ್ತಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಅಮೂಲ್ಯ ಅವರು ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. ಇವರ ಕ್ಯೂಟ್ ಫೋಟೋಗಳನ್ನು ಅಮೂಲ್ಯ ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಇವರ ಕೃಷ್ಣನ ಗೆಟಪ್ ಸಾಕಷ್ಟು ಗಮನ ಸೆಳೆದಿದೆ.
ಬಾಲನಟಿಯಾಗಿ ಗುರುತಿಸಿಕೊಂಡಿದ್ದ ನಟಿ, ಬಳಿಕ ‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾದರು ಕನ್ನಡದಲ್ಲಿ ಅಮೂಲ್ಯ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆ ಆದ ಬಳಿಕ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಮಕ್ಕಳ ಆರೈಕೆಯಲ್ಲಿ ಅಮೂಲ್ಯ ಅವರು ಬ್ಯುಸಿ ಆಗಿದ್ದಾರೆ. ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.










