ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ…

59
firstsuddi

ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪರಿಣಾಮ ಕೆಲಕಾಲ ಆತಂಕ ಸೃಷ್ಟಿಸಿತ್ತು.

ಬೆಳಗಿನ ಜಾವ 3.30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತನೊಬ್ಬ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಏರ್ ಪೋರ್ಟ್ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಆದ್ರೆ ಯಾವುದೇ ಅನುಮಾನಸ್ಪದವಾದ ವಸ್ತು ಕಂಡುಬಂದಿಲ್ಲ. ಸದ್ಯ ತನಿಖೆ ಮುಂದುವರಿದಿದೆ.