ಬಳ್ಳಾರಿ: ಕೆಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದ ಬಳಿ ನಡೆದಿದೆ.
ಹುಸೇನಪ್ಪ (54) ಮೃತ ಸೆಕ್ಯುರಿಟಿ ಇನ್ಸ್ಪೆಕ್ಟರ್. ಕೆಎಸ್ಆರ್ಟಿಸಿಯಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹುಸೇನಪ್ಪ ಬೀದರ್ನಲ್ಲಿ ನಡೆಯಲಿರುವ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದರು. ಅವರು ಮನೆಯಿಂದ ಬೈಕ್ನಲ್ಲಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ ವೇಳೆ ಹತ್ಯೆ ನಡೆಸಲಾಗಿದೆ.
ಅವರ ತಲೆಗೆ ಬಲವಾದ ಗಾಯಗಳಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಶಂಕೆ ಎದುರಾಗಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಕೆಎಸ್ಆರ್ಟಿಸಿ ಡಿಸಿ ದೇವರಾಜ್, ಗಾಂಧಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.










