ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು…

60
firstsuddi

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ 2 ಗಂಟೆ ವೇಳೆ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಬಸವರಾಜು ಮೃತ ಫುಡ್ ಡೆಲಿವರಿ ಬಾಯ್. ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸವರಾಜು ತಲೆ, ಬಸ್ ಮುಂಭಾಗದ ಎಡಚಕ್ರಕ್ಕೆ ಸಿಲುಕಿದೆ. ಬಳಿಕ ಬಸ್ ತಲೆಯ ಮೇಲೆ ಹರಿದಿದ್ದು, ಬಸವರಾಜು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನು ಬಸ್ ದೇಹವನ್ನು ಸುಮಾರು 20 ಮೀಟರ್ ನಷ್ಟು ದೂರಕ್ಕೆ ಎಳೆದೊಯ್ದಿತ್ತು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.