ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ಅರಮನೆ ರಸ್ತೆಯಲ್ಲಿ ನಡೆದಿದೆ.
ಲಕ್ಷ್ಮೀದೇವಿ (50) ಮೃತ ಮಹಿಳೆ. ಲಕ್ಷ್ಮೀ ಅವರು ತಮ್ಮ ಸಹೋದರನ ಜೊತೆ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಪುಟ್ಟಪರ್ತಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇವರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಲಕ್ಷ್ಮೀ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಯ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸದಾಶಿವನಗರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










